No menu items!
11.1 C
Munich
Wednesday, April 29, 2026

ಪ್ರತ್ಯೇಕ ಹುಣಸೂರು ಜಿಲ್ಲೆಗೆ ಹೆಚ್ಚಾಯಿತು ಒತ್ತಡ

Must read

ಹುಣಸೂರು ವಿಧಾನಸಭೆ ಉಪ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ರಾಜಕೀಯದಲ್ಲಿ ವೈರಿಗಳಾಗಿ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹಾಗೂ ಹುಣಸೂರು ಕಾಂಗ್ರೆಸ್ ಶಾಸಕ ಎಚ್.ಪಿ. ಮಂಜುನಾಥ್ ಒಂದಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನದ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ವಿಶ್ವನಾಥ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹುಣಸೂರು ತಾಲ್ಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಡ ಹೇರಿದ್ದರು. ಅಲ್ಲದೇ ಹುಣಸೂರು ಉಪ ಚುನಾವಣೆ ಸಂದರ್ಭದಲ್ಲೇ ಇದೇ ವಿಷಯವನ್ನು ವಿಶ್ವನಾಥ್ ಚುನಾವಣಾ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡಿದ್ದರು. ಆದರೆ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಈ ವಿಚಾರದ ಕುರಿತು ಯಾವುದೇ ಚರ್ಚೆ ನಡೆದಿರಲಿಲ್ಲ.

ಆದರೀಗ ಮತ್ತೊಮ್ಮೆ ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಕೇಳಿ ಬಂದಿದ್ದು, ಹುಣಸೂರು ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಸಲುವಾಗಿ ಉಪ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳಾಗಿದ್ದ ಎಂಎಲ್‌ಸಿ ಎಚ್. ವಿಶ್ವನಾಥ್ ಹಾಗೂ ಕಾಂಗ್ರೆಸ್ ಶಾಸಕ ಎಚ್.ಪಿ. ಮಂಜುನಾಥ್ ಒಂದಾಗಿದ್ದಾರೆ. ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ಗೆ ಮನವಿ ಸಲ್ಲಿಸಲು ಇಬ್ಬರು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮೈಸೂರು ಜಿಲ್ಲೆಯ ಒತ್ತಡ ಕಡಿಮೆ ಮಾಡಲು ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಜಂಟಿಯಾಗಿ ಇಬ್ಬರು ನಾಯಕರು ಘೋಷಣೆ ಮಾಡಿದ್ದು, ಇದೇ ವಿಚಾರವನ್ನು ಮುಂದಿನ ಅಧಿವೇಶನದಲ್ಲೂ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article