ಅಂತರಾಜ್ಯ ಬಸ್ ಸಂಚಾರ ಆರಂಭ

Date:

ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್ ನಡುವೆ ಐಷಾರಾಮಿ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ಬಳ್ಳಾರಿ-ಬೆಂಗಳೂರು ಮತ್ತು ಹರಪನಹಳ್ಳಿಯಿಂದ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಪೇಟೆ ಮಾರ್ಗವಾಗಿ ಕಲಬುರಗಿಗೆ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ.

ಬಳ್ಳಾರಿ ವಿಭಾಗ ಬಳ್ಳಾರಿ-ಚೆನ್ನೈ ಮಾರ್ಗದಲ್ಲಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆಗಸ್ಟ್ 27ರಿಂದ ಪುನಃ ಪ್ರಾರಂಭಿಸುತ್ತಿದೆ. ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಮಾಹಿತಿ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಬಳ್ಳಾರಿ-ಚೆನ್ನೈ ವಯಾ ಅನಂತಪುರ ಮಾರ್ಗದಲ್ಲಿ ನಾನ್‍ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...