ಉಪನ್ಯಾಸಕ ಹುದ್ದೆಗೆ ಬೇಕಾಗಿದ್ದಾರೆ

Date:

ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯ, ಕಲಬುರಗಿಯ ಪ್ರೊಬೇಷನರಿ ಪಿ. ಎಸ್. ಐ. ಪ್ರಶಿಕ್ಷಣಾರ್ಥಿಗಳಿಗೆ ಮನೋವಿಜ್ಞಾನ ವಿಷಯ ಕುರಿತು ಬೋಧನೆ ಮಾಡಲು ಅರ್ಹ ಅತಿಥಿ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಒಂದು ವಾರದೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಬಯೋಡೇಟಾ ಸಹಿತ ಕಳಿಸಬಹುದಾಗಿದೆ ಎಂದು ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ.

 

ಮನೋ ವಿಜ್ಞಾನ ವಿಷಯ ಬೋಧಿಸಲು ಇಚ್ಛೆಹೊಂದಿರುವ ಉಪನ್ಯಾಸಕರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಉಪನ್ಯಾಸಕರ ಬೋಧನೆ ಭತ್ಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶ್ರೀ ಶರಣಬಸವೇಶ್ವರ, ಡಿಎಸ್‍ಪಿ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 94489 47267.

ಸಹಾಯಕ ಯೋಜನಾ ವ್ಯವಸ್ಥಾಪಕ; ಕರ್ನಾಟಕ ಅನುಸೂಚಿತ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಯೋಜನೆಯಡಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳ ಬಗ್ಗೆ ಬೆಳಗಾವಿ ವಿಭಾಗ ಮಟ್ಟದ ಸಮಗ್ರ ಮೇಲ್ವಿಚಾರಣೆಗೆ ಸಮಾಜ ಕಲ್ಯಾಣ ಇಲಾಖೆಯ ಧಾರವಾಡ ಜಂಟಿ ನಿರ್ದೇಶಕರ ಕಾರ್ಯಾಲಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಎಸ್. ಸಿ. ಎಸ್. ಪಿ, ಟಿ. ಎಸ್. ಪಿ. ಕೋಶ ತೆರೆಯಲಾಗಿದೆ.

ಸಮಗ್ರ ಮೇಲ್ವಿಚಾರಣಾ ಕೋಶದ ನಿರ್ವಹಣೆಗಾಗಿ ಹಾಗೂ ಸಮಗ್ರ ಮೇಲ್ವಿಚಾರಣೆಗಾಗಿ ಹೊರ ಸಂಪನ್ಮೂಲ ಆಧಾರದ ಮೇರೆಗೆ ಸಹಾಯಕ ಯೋಜನಾ ವ್ಯವಸ್ಥಾಪಕ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

 

ಆಸಕ್ತವುಳ್ಳ ಅರ್ಹ ಅಭ್ಯರ್ಥಿಗಳು ಆಗಸ್ಟ್‌ 31ರ ಕಾರ್ಯಾಲಯದ ಅವಧಿಯೊಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 0836-2447201.

ಅರ್ಜಿ ಆಹ್ವಾನ; ಹಾಸನ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಯೋಜನೆಯಡಿ ಗ್ರಾಮೀಣ/ ನಗರ/ ಪ್ರದೇಶದ 18 ವರ್ಷಗಳ ಮೇಲ್ಪಟ್ಟ (ಎಸ್.ಸಿ, ಎಸ್,ಟಿ, ಓ.ಬಿ.ಸಿ, ಅಲ್ಪಸಂಖ್ಯಾತ ಇತರೆ) ಪುರುಷ/ ಮಹಿಳಾ ಅಭ್ಯರ್ಥಿಗಳು ಹೊಸದಾಗಿ ಕೈಗಾರಿಕೆ / ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು.

ಉತ್ಪಾದನಾ ವಲಯಕ್ಕೆ 25 ಲಕ್ಷ ರೂ. ಹಾಗೂ ಸೇವಾ ವಲಯಕ್ಕೆ 10 ಲಕ್ಷ ರೂ.ಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಸಾಲ ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು https://kviconline. gov.in/pmegpeportal ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಡೈರಿ ಸರ್ಕಲ್ ಹತ್ತಿರ ಬಿ. ಎಂ. ರಸ್ತೆ ಹಾಸನದ ಆಡಳಿತ ಕಚೇರಿಯನ್ನು ಸಂಪರ್ಕಿಸಿ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...