ರಾಜ್ಯದ ಮೊದಲ ಮಾದರಿ ಗೋಶಾಲೆ ಸ್ಥಾಪನೆಗೆ ಚಾಲನೆ

Date:

ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾನೂನು ಜಾರಿಯಾದ ಬಳಿಕ, ಗೋ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಾದರಿ ಗೋಶಾಲೆ ಸ್ಥಾಪನೆಗೆ ಶನಿವಾರ ಚಾಲನೆ ದೊರೆತಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಶನಿವಾರದಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಹೋಬಳಿ ನಾಗರೆಡ್ಡಿಹಳ್ಳಿ ಬಳಿ ಪಶುಸಂಗೋಪನಾ ಇಲಾಖೆಯಿಂದ ನಿರ್ಮಿಸಲು ಉದ್ದೇಶಿಸಿರುವ ಗೋಶಾಲೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ಹಿಂದೆಯೇ ರಾಜ್ಯ ಸರ್ಕಾರ ಗೋ ಸಂರಕ್ಷಣೆಗೆ ಆದ್ಯತೆ ನೀಡಿ ಕಠಿಣ ಕಾನೂನು ಜಾರಿ ಮಾಡಿದೆ. ಇದಕ್ಕೆ ಪೂರಕವಾಗಿ ಸಚಿವ ಡಾ.ಕೆ.ಸುಧಾಕರ್ ತಮ್ಮ ಜಿಲ್ಲೆಯಲ್ಲಿ ಗೋ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭಾರತೀಯ ಪರಂಪರೆ, ಸಾಂಪ್ರದಾಯಿಕ ಕೃಷಿಯನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ.

 

ಗೋ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು 50 ಲಕ್ಷ ರೂ. ನಿಗದಿಪಡಿಸಿದೆ. ನಾಗರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂ.41 ರಲ್ಲಿ 10 ಎಕರೆಯನ್ನು ಗೋಶಾಲೆಗೆ ಮೀಸಲಿಟ್ಟಿದ್ದು, 2021ರ ಅಕ್ಟೋಬರ್ 2 ರೊಳಗಾಗಿ ಇದನ್ನು ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಕೊಟ್ಟಿಗೆ, ಕೃಷಿ ಹೊಂಡ, ಮೇವು ಉತ್ಪಾದನೆ ಮೊದಲಾದ ಯೋಜನೆಗಳನ್ನು ಒಂದು ಮಾಡಲು ಉದ್ದೇಶಿಸಲಾಗಿದೆ.

ಗೋಶಾಲೆಯ ಉಪ ಉತ್ಪನ್ನಗಳನ್ನು ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಅಥವಾ ಕೆಎಪಿಎಲ್‌ನಿಂದ ಮಾರಾಟ ಮಾಡಿ, ಸಂಪನ್ಮೂಲ ಕ್ರೋಢೀಕರಣ ಮಾಡಲಾಗುತ್ತದೆ. ಗೋಶಾಲೆಯ ಸುಸ್ಥಿರತೆ, ನಿರ್ವಹಣೆಗೆ ಮೇವು ಬೆಳೆಯುವುದು, ಉತ್ಪನ್ನ ಮಾರಾಟ ಮಾಡಲು ಜಿಲ್ಲಾ ಪ್ರಾಣಿ ದಯಾ ಸಂಘಕ್ಕೆ ಅವಕಾಶ ನೀಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಜಾನುವಾರುಗಳನ್ನು ನೋಡಿಕೊಳ್ಳಲು ಮುಂದೆ ಬಂದರೆ, ಅದಕ್ಕೂ ಅವಕಾಶವಿದೆ.

 

ರಾಜ್ಯದಲ್ಲಿ ಗೋಶಾಲೆಗಳ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಮೊದಲ ಹಾಗೂ ಎರಡನೇ ಕಂತು ಸೇರಿ 24 ಲಕ್ಷ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಸರ್ಕಾರ ಅಥವಾ ಸಂಸ್ಥೆಗಳಿಂದ ನಡೆಸುವ ಗೋಶಾಲೆಯಲ್ಲಿ ಪ್ರತಿ ಜಾನುವಾರು ವೆಚ್ಚ ದಿನಕ್ಕೆ 17.30 ರೂ. ನಿಗದಿಪಡಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಒಟ್ಟು ಜಾನುವಾರು ಪೈಕಿ ಶೇ.0.75 ರಷ್ಟು ಜಾನುವಾರುಗಳಿಗೆ ಸ್ಥಳಾವಕಾಶ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. 2018 ರ ಗಣತಿ ಪ್ರಕಾರ ಜಿಲ್ಲೆಯಲ್ಲಿ 2,13,815 ದನಗಳು ಹಾಗೂ 26,397 ಎಮ್ಮೆಗಳಿವೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...