KSRTC ಸಿಬ್ಬಂದಿಗೆ ಸಿಎಂ ಕಡೆಯಿಂದ ಸಿಹಿಸುದ್ದಿ

Date:

ರಾಜ್ಯ ರಸ್ತೆ ಸಾರಿಗೆ ನಿಗಮ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ ಎಂಬ ಆಪಾದನೆಗಳಿವೆ. ಸಾರಿಗೆ ನಿಗಮವನ್ನು ನಷ್ಟದಿಂದ ಲಾಭದತ್ತ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮ ಸಾಕಷ್ಟು ಸೇವೆ ಒದಗಿಸುತ್ತದೆ. ಜೊತೆಗೆ ಖಾಸಗಿ ಸಾರಿಗೆ ಸಂಸ್ಥೆಗಳಿಗಿಂತ ಹೆಚ್ಚಿನ ಜನರು ಸರ್ಕಾರಿ ಸಾರಿಗೆಯಲ್ಲಿಯೇ ಸಂಚಾರ ಮಾಡುತ್ತಾರೆ. ಆದರೂ ಸಾರಿಗೆ ನಿಗಮವು ಯಾಕೆ ನಷ್ಟದಲ್ಲಿರುತ್ತದೆ ಎಂಬುದು ಪ್ರಯಾಣಿಕರು ಹಾಗೂ ಸಾರ್ವಜನಿಕರ ಪ್ರಶ್ನೆ.

ಇದೀಗ ಸಾರ್ವಜನಿಕರ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಥಾಪನೆಯಾಗಿ 60 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

 

“ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಜೊತೆಗೆ ಸಾರಿಗೆ ನಿಗಮದ ನೌಕರರಿಗೆ ಸಿಹಿ ಸುದ್ದಿಯನ್ನೂ ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟಿದ್ದಾರೆ.

ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು. ಕೆ.ಎಸ್.ಆರ್.ಟಿ.ಸಿ. ಗೆ ತನ್ನದೇ ಅಂತರ್ಗತವಾದ ಶಕ್ತಿ ಇದೆ; ವಿಸ್ತಾರವಿದೆ; ಜಾಲವಿದೆ. ಇವುಗಳನ್ನು ಹೆಚ್ಚಿಸುವುದು ಹೇಗೆ ಎಂಬ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

 

ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...