No menu items!
9.3 C
Munich
Wednesday, April 29, 2026

ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Must read

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 09ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article