ವ್ಯಾಪಾರಿಗಳ, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಗುರುವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲಾಗಿದೆ. ಕರ್ನಾಟಕದಲ್ಲಿನ ಪಾಸಿಟಿವಿಟಿ ದರ ಶೇ 0.63 ಆಗಿದೆ. ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದ್ದ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 2ಕ್ಕಿಂತ ಕಡಿಮೆಯಾಗಿದೆ. ಆದ್ದರಿಂದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ.