ಗಣೇಶ ಕೂರಿಸಲು ಪ್ಲಾನ್ ಮಾಡಿದ ಮೂವರ ಮರಣ

Date:

ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ‌ ಮಾಡಿದೆ. ಆದರೆ ಈ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ಕೇಳಲು ಪೊಲೀಸ್ ಠಾಣೆಗೆ ಹೋಗಿ ವಾಪಸ್ ಬರುವಾಗ ಮೂವರು ಯುವಕರು ಅಪಘಾತದಲ್ಲಿ ಬಲಿಯಾಗಿದ್ದಾರೆ. ಈ ಗ್ರಾಮದಲ್ಲಿ ಹಬ್ಬದ ವಾತಾವರಣದ ಬದಲು ಶೋಕ ಮಡುಗಟ್ಟಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ ಬಳಿ ಬೈಕ್ ಮತ್ತು ಬುಲೆರೋ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿದ್ದ ಮಲ್ಲೇಶಪುರ ಗ್ರಾಮದ 18 ವರ್ಷದ ಅಜ್ಜಯ್ಯ, 17 ವರ್ಷದ ಮಂಜುನಾಥ್ ಹಾಗೂ 17 ವರ್ಷದ ದೇವರಾಜ್ ಎಂಬುವವರು ಮೃತಪಟ್ಟಿರುವ ಯುವಕರಾಗಿದ್ದಾರೆ.

ಸಾರ್ವಜನಿಕ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ಪಡೆಯಲು ಚನ್ನಗಿರಿ ಪೊಲೀಸ್ ಠಾಣೆಗೆ ಮೂವರು ಯುವಕರು ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದ ವೇಳೆ ರಾಜಗೊಂಡನಹಳ್ಳಿ ಬಳಿ ಕಡೂರಿಂದ ಚನ್ನಗಿರಿ ಕಡೆಗೆ ಬರುತ್ತಿದ್ದ ಬುಲೆರೋ ವಾಹನ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಚಿಂತಾಜನಕ ಸ್ಥಿತಿಯಲ್ಲಿದ್ದ.

ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯದಲ್ಲಿಯೇ ಆತನೂ ಮೃತಪಟ್ಟಿದ್ದಾನೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...