ಶಹಾಪೂರ ಮಹಿಳೆ ಮೇಲೆ ಹಲ್ಲೆ ಕೇಸ್‌ಗೆ ಟ್ವಿಸ್ಟ್!

Date:

ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 8 ರಿಂದ 9 ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಸೋಮವಾರ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಈ ಕುರಿತು ಹೇಳಿಕೆ ನೀಡಿದ್ದಾರೆ, “ಇದು 8 ರಿಂದ 9 ತಿಂಗಳ ಹಿಂದೆ ನಡೆದ ಪ್ರಕರಣವಾಗಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಬಂಧ 3 ತಂಡಗಳಿಂದ ತನಿಖೆ ನಡೆಯುತ್ತಿದೆ” ಎಂದು ಹೇಳಿದರು.

 

“ಇದು ಹಳೆಯ ವಿಡಿಯೋ ಇದು ಶಹಾಪೂರದ ಹೊರವಲಯದಲ್ಲಿ ನಡೆದ ಘಟನೆಯಾಗಿದೆ. ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದು ಎಸ್‌ಪಿ ತಿಳಿಸಿದರು.

 

ಘಟನೆಯ ಹಿನ್ನಲೆ; ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಣ ಮಾಡಿ, ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ಮಾಡಲಾಗಿದೆ. ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಅದನ್ನು ವಿಡಿಯೋ ಸಹ ಮಾಡಲಾಗಿದೆ ಎಂಬುದು ಆರೋಪವಾಗಿದೆ.

ಈ ಪ್ರಕರಣದ ಒಬ್ಬ ಆರೋಪಿ ಪಿಎಸ್‌ಐ ವಾಹನದ ಚಾಲಕನಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದಾನೆ. ಆತನನ್ನು ಮೊದಲು ಹಿಡಿದು ವಿಚಾರಣೆ ನಡೆಸಿದಾಗ ಉಳಿದ ಮೂವರು ಆರೋಪಿಗಳು ಪತ್ತೆಯಾಗಿದ್ದಾರೆ.

ಶಹಾಪೂರ ನಗರದಲ್ಲಿಯೇ ಮಹಿಳೆ ವಾಸವಾಗಿದ್ದು, ಆಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆಕೆಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬಳಿಕ ತಿಳಿದುಬರಲಿದೆ. ಮಹಿಳೆ ವೈದ್ಯಕೀಯ ಪರೀಕ್ಷೆ ನಡೆಸಲು ಸಹ ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ.

ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ನೇತೃತ್ವದಲ್ಲಿ ಕೃತ್ಯ ನಡೆದ ಸ್ಥಳದಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ. ಬಂಧಿಸಲಾದ ನಾಲ್ವರು ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದೆ. ಆರೋಪಿಗಳ ವಿಚಾರಣೆ ಬಳಿಕ ಈ ಕೃತ್ಯದಲ್ಲಿ ಬೇರೆ ಯಾರು ಭಾಗಿಯಾಗಿದ್ದರು? ಎಂಬ ಮಾಹಿತಿ ತಿಳಿಯಲಿದೆ.

 

ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿ, ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸೋಮವಾರ ವಿಡಿಯೋ ವೈರಲ್ ಆಗಿದೆ. ಘಟನೆ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂಬ ಮಾಹಿತಿ ಇತ್ತು. ಆದರೆ ಶಹಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಮಹಿಳೆಯನ್ನು ನಗ್ನಗೊಳಿಸಿ 4 ರಿಂದ 5 ಜನರ ತಂಡ ಆಕೆಯ ಮೇಲೆ ಕಬ್ಬಿನ ಜಲ್ಲೆಯಿಂದ ಹಲ್ಲೆ ಮಾಡಿದೆ. ಕೃತ್ಯ ನಡೆದ ಸ್ಥಳದ ಮಹಜರಿಗೆ ಆರೋಪಿಗಳನ್ನು ಕರೆದುಕೊಂಡು ಹೋಗಲಾಗಿದೆ.

ಮಹಿಳೆಗೆ ಹೊಡೆಯುವ ನೆಪದಲ್ಲಿ ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಲಾಗಿದೆ. ವಾಹನದ ಹೆಡ್ ಲೈಟ್, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ.

ಮಹಿಳೆ ಕೈ ಮುಗಿದು ಬಿಟ್ಟುಬಿಡಿ ಎಂದು ಬೇಡಿಕೊಳ್ಳುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ. ಒಬ್ಬರು ಹೊಡೆಯುವಾಗ ಮತ್ತೊಬ್ಬರು ವಿಡಿಯೋ ಮಾಡುತ್ತಿದ್ದಾರೆ. ಘಟನೆ ಬಗ್ಗೆ ದೂರು ನೀಡಿದರೆ ಸುಟ್ಟು ಹಾಕುತ್ತೇವೆ ಎಂದು ಬೆದರಿಕೆ ಸಹ ಹಾಕಲಾಗಿದೆ.

ಘಟನೆ ಬಗ್ಗೆ ಯಾದಗಿರಿಯ ಶಹಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಳೇ ಪ್ರಕರಣದ ವಿಡಿಯೋ ಈಗ ವೈರಲ್ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...