ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯ ಬಂಧನವಾಗಿದೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ ಸುಶಾಂತ್ ಸಿಂಗ್ ಸ್ನೇಹಿತ ಕುನಾಲ್ ಜಾನಿಯನ್ನು ಎನ್‌ಸಿಬಿ ಅಧಿಕಾರಿಗಳು ಮುಂಬೈನ್ ಖಾರ್ ಪ್ರದೇಶದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
”ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿವಂಗತ ನಟ ಸುಶಾಂತ್ ಸಿಂಗ್ ಗೆಳಯ ಕುನಾಲ್ ಜಾನಿಯನ್ನು ಮುಂಬೈ ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ” ಎಂದು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಕುನಾಲ್ ಜಾನಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಇಂಡಿಯಾ ಟುಡೇಗೆ ಪ್ರತಿಕ್ರಿಯಿಸಿದ್ದು, “ಡ್ರಗ್ ಪೆಡ್ಲರ್‌ಗಳೊಂದಿಗಿನ ಸಂಪರ್ಕ ಮತ್ತು ಕಳೆದ ವರ್ಷ ಎನ್‌ಸಿಬಿ ಭೇದಿಸಿದ ಡ್ರಗ್ ಸಿಂಡಿಕೇಟ್ ಬಗ್ಗೆ ಕುನಾಲ್ ಜಾನಿಯನ್ನು ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ