ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2021ಕ್ಕೆ ಗುರುವಾರ ವಿದ್ಯುಕ್ತ ಚಾಲನೆ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರಳ ದಸರಾವನ್ನು ಉದ್ಘಾಟಿಸಿದರು.
ಗುರುವಾರ ಬೆಳಗ್ಗೆ 8.15 ರಿಂದ 8.45ರ ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾ ಮಹೋತ್ಸವ 2021ಕ್ಕೆ ಎಸ್. ಎಂ. ಕೃಷ್ಣ ದೀಪ ಬೆಳಗಿ ಚಾಲನೆ ನೀಡಿದರು. ನಾಡ ದೇವತೆ ಚಾಮುಂಡೇಶ್ವರಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು.