ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು, ಕೆಲವು ರಾಜ್ಯಗಳಲ್ಲಿ ಇನ್ನಷ್ಟು ದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗಲಿರುವುದಾಗಿ ತಿಳಿಸಿದೆ.
ಮುಂದಿನ 4-5 ದಿನಗಳಲ್ಲಿ ಪಶ್ಚಿಮದಿಂದ ವಾಯವ್ಯ ದಿಕ್ಕಿಗೆ- ದಕ್ಷಿಣ ಒಡಿಶಾ, ಆಂಧ್ರಪ್ರದೇಶ ಉತ್ತರ ಕರಾವಳಿ ಕಡೆಗೆ ಚಂಡಮಾರುತ ಪರಿಚಲನೆಯಾಗಬಹುದು ಎಂದು ತಿಳಿಸಿದೆ. ಈ ಚಂಡಮಾರುತ ಪ್ರಭಾವದಿಂದಾಗಿ ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಲಿದೆ. ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡಿನಲ್ಲಿ, ಆಂಧ್ರ ಪ್ರದೇಶ, ಕೇರಳದಲ್ಲಿ ಶುಕ್ರವಾರ ಅಧಿಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.