ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ದಸರಾ ಹಬ್ಬಕ್ಕೆ ಶ್ರೀಮುರಳಿ ನಟನೆಯ ಮದಗಜ ಸಿನಿಮಾದಿಂದ ಸಖತ್ ಸುದ್ದಿ ಹೊರಬಿದ್ದಿದೆ. ಹೌದು, ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.
ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಮದಗಜ ಸಿನಿಮಾದ ಟೀಸರ್ ಇದೇ ತಿಂಗಳು ದಸರ ಪ್ರಯುಕ್ತ ಅಭಿಮಾನಿಗಳ ಮುಂದೆ ಬರ್ತಿದೆ. ಮದಗಜ ಸಿನಿಮಾದ ಎರಡನೇ ಟೀಸರ್ ಅಕ್ಟೋಬರ್ 14, ಸಂಜೆ 5.5ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದ ಮದಗಜ ಸದ್ಯ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ.
ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಮದಗಜ ಸಿನಿಮಾತಂಡ ಸದ್ಯ ಟೀಸರ್ ಮೂಲಕ ಬರ್ತಿದೆ. ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ಮದಗಜ ಡಿಸೆಂಬರ್ ತಿಂಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಮುಂದಕ್ಕೆ ಹೋಗಿದ್ದು, ಡಿಸೆಂಬರ್ ತಿಂಗಳಲ್ಲಿ ತೆರೆಗೆ ಬರ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.