ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಅನೇಕ ಜನರು ಹೊಸ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಟಿವಿ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್ ಉತ್ಪನ್ನಗಳನ್ನು ಖರೀದಿಸಲು ಮುಂದಾಗುತ್ತಾರೆ. ಹಬ್ಬದ ಸಂದರ್ಭದಲ್ಲಿ ಇ ಕಾಮರ್ಸ್ ತಾಣಗಳು ಭಾರೀ ಡಿಸ್ಕೌಂಟ್ ನೀಡುತ್ತವೆ ಎಂದು ಇದೀಗ ಜನರು ಇ ಕಾಮರ್ಸ್ ತಾಣಗಳತ್ತ ಮುಖ ಮಾಡುತ್ತಿದ್ದಾರೆ. ಈ ರೀತಿ ನೀವು ಡಿಸ್ಕೌಂಟ್‌ನಲ್ಲಿ ಹೊಸ ಫೋನ್ ಖರೀದಿಸುವ ಆಲೋಚನೆ ಮಾಡಿದ್ರೆ, ಸದ್ಯ ಅಮೆಜಾನ್ ಇ ಕಾಮರ್ಸ್ ತಾಣವೇ ಸೂಕ್ತ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಇದೇ ಅಕ್ಟೋಬರ್ 3 ರಂದು ‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021’ ಸೇಲ್ ಆಯೋಜಿಸಿದೆ. ಈ ಸೇಲ್‌ನಲ್ಲಿ ಭರ್ಜರಿ ಆಫರ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್ ಉತ್ಪನ್ನಗಳಿಗೆ ಭಾರೀ ರಿಯಾಯಿತಿ ತಿಳಿಸಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ಹಾಗೆಯೇ ಆಯ್ದ ಕೆಲವು ಜನಪ್ರಿಯ ವಿವೋ (vivo) ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ಲಭ್ಯ.
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಶಿಯೋಮಿ ವಿವೋ (vivo) ಮೊಬೈಲ್ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ವಿವೋ ಕಂಪನಿಯು ಭಿನ್ನ ಸರಣಿಯಲ್ಲಿ ಹಲವು ಮೊಬೈಲ್ ಪರಿಚಯಿಸಿದ್ದು, ಅವುಗಳಲ್ಲಿ ಗ್ರಾಹಕರಿಗೆ ಬಜೆಟ್ ಬೆಲೆಯಿಂದ ಹೈ ಎಂಡ್ ಫೋನ್‌ಗಳ ಆಯ್ಕೆ ಸಹ ಲಭ್ಯ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ವಿವೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y21 ಸ್ಮಾರ್ಟ್ಫೋನ್ವಿವೋ Y21 ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ (ಗಳು) IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ವಿವೋ Y33s ಸ್ಮಾರ್ಟ್ಫೋನ್ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಇದೆ.
ವಿವೋ Y20G 2021 ಸ್ಮಾರ್ಟ್ಫೋನ್ವಿವೋ Y20G ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನ ಹೊಂದಿದೆ. MTK P35 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರೊಂದಿಗೆ 18W ವೇಗದ ಚಾರ್ಜಿಂಗ್ ಅನ್ನು ಒದಗಿಸಲಾಗಿದೆ.