“ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ”

Date:

” ಸಿದ್ದರಾಮಯ್ಯ ಜೆಡಿಎಸ್ ಮುಳುಗಿಸಲು ಯತ್ನಿಸಿದರು. ಈಗ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮ್ಮಿಶ್ರ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ಸಿದ್ಧಸೂತ್ರ ರೂಪಿಸಿದವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಬುಧವಾರ ಬಿಡದಿಯ ತೋಟದ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ‌ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು, “ಸಿದ್ದರಾಮಯ್ಯನವರೇ ಇಷ್ಟು ದಿನ ನನ್ನ ಬಗ್ಗೆ ಮತ್ತು ನನ್ನ ಪಕ್ಷದ ಬಗ್ಗೆ ಮಾತನಾಡಿದ್ದು ಸಾಕು. ಎಲ್ಲವನ್ನೂ ಇಲ್ಲಿಗೆ ನಿಲ್ಲಿಸಿ. ನೀವು ನಿಲ್ಲಿಸದಿದ್ದರೆ ನಾನೂ ಮಾತನಾಡುವುದನ್ನು ಮುಂದುವರೆಸಬೇಕಾಗುತ್ತದೆ” ಎಂದರು.

ಸಿದ್ದರಾಮಯ್ಯ ಅವರು ಮೊದಲು ನಮ್ಮ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ. ಆಮೇಲೆ ನಾನು ಮಾತನಾಡುವುದನ್ನು ನಿಲ್ಲಿಸುತ್ತೇನೆ. ಸಿದ್ದರಾಮಯ್ಯ ವಿಶ್ವಾಸಕ್ಕೆ ಅರ್ಹವಲ್ಲದ ವ್ಯಕ್ತಿ. ಅವರು ನಮ್ಮ ಪಕ್ಷದ ವಿರುದ್ಧ ಸರಣಿ ಹೇಳಿಕೆಗಳನ್ನು ನೀಡುತ್ತಿರುವುದು ಒಂದೆಡೆ ಆಗುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷವನ್ನು ಕುತಂತ್ರದಿಂದ ಅವರೇ ಮತ್ತಷ್ಟು ಮುಳುಗಿಸುತ್ತಿದ್ದಾರೆ” ಎಂದು ಎಚ್. ಡಿ. ಕುಮಾರಸ್ವಾಮಿ ದೂರಿದರು.

Share post:

Subscribe

spot_imgspot_img

Popular

More like this
Related

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್...

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ! ಬೆಂಗಳೂರು:  ಸಿಲಿಕಾನ್ ಸಿಟಿ...

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...