ಹಿರಿಯನಟ ಜಿ.ಕೆ ಗೋವಿಂದರಾವ್ ಇನ್ನಿಲ್ಲ

Date:

ಹುಬ್ಬಳ್ಳಿ, ಅಕ್ಟೋಬರ್ 15: ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ಅವರು ನಿಧನರಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿಇಂದು ಬೆಳಿಗ್ಗೆ 8 ಗಂಟೆಗೆ ಅಂತ್ಯಸಂಸ್ಕಾರ ನಡೆದಿದೆ.

ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ.ಕೆ. ಗೋವಿಂದ ರಾವ್​​ ತಮ್ಮ ಇಳಿ ವಯಸ್ಸಿನಲ್ಲೂ ರಂಗ ಚಟುವಟಿಕೆ ಮತ್ತು ಹೋರಾಟದಲ್ಲಿ ಸಕ್ರಿಯರಾಗಿದ್ದರು.ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜಿ.ಕೆ. ಗೋವಿಂದರಾವ್ ನಿಧನದ ಸುದ್ದಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಸಂತಾಪ ಸೂಚಿಸಿದ್ದಾರೆ.

ಮೂಲತಃ ಇಂಗ್ಲೀಷ್​​ ಪ್ರೊಫೆಸರ್​ ಆಗಿದ್ದ ಜಿ.ಕೆ. ಗೋವಿಂದರಾವ್​​ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರು ಬಹುಮುಖ ಪ್ರತಿಭೆ. ಸಾಹಿತ್ಯದ ಜೊತೆಜೊತೆಗೆ ನಾಟಕ ರಂಗದಲ್ಲೂ ಜಿ.ಕೆ. ಗೋವಿಂದರಾವ್​ ಸಕ್ರಿಯರಾಗಿದ್ದರು. ಅಲ್ಲದೆ ಹಲವು ಸಿನಿಮಾ ಮತ್ತು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಜೀವಂತಿಕೆ ತುಂಬಬಲ್ಲ ಸಾಮರ್ಥ್ಯ ಜಿ.ಕೆ. ಗೋವಿಂದ ರಾವ್‌ವರಿಗಿತ್ತು.

 

ಗ್ರಹಣ, ಮಿಥಿಲೆಯ ಸೀತೆಯರು, ಕರ್ಫ್ಯೂ, ನಿಶ್ಯಬ್ದ, ಭೂಮಿ ತಾಯಿಯ ಚೊಚ್ಚಲ ಮಗ, ಅಜ್ಜು, ಶಾಸ್ತ್ರಿ ಮುಂತಾದ ಹಲವು ಸಿನಿಮಾಗಳಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...