ಐಪಿಎಲ್ ಟೀಮ್ ಖರೀದಿಸಲು ಮುಂದಾದ ದೀಪಿಕಾ ಪಡುಕೋಣೆ!

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ ತಂಡವನ್ನು ಹೊಂದಲು ಮತ್ತು ಕಾರ್ಯನಿರ್ವಹಿಸಲು ಟೆಂಡರ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ ಮತ್ತು ಆಗಸ್ಟ್ 31 ರಂದು ಟೆಂಡರ್ ಗೆ ಆಹ್ವಾನ ನೀಡಿದೆ.

 

ಈಗ, ಬಾಲಿವುಡ್ ನ ಜನಪ್ರಿಯ ತಾರಾ ದಂಪತಿ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ (Ranveer Singh) ಅವರು ಐಪಿಎಲ್ ತಂಡವನ್ನು ಹೊಂದಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

2022 ರಲ್ಲಿ ಐಪಿಎಲ್ ಹತ್ತು ತಂಡಗಳ ಟೂರ್ನಿಯಾಗಲಿದೆ. ಬಿಸಿಸಿಐ ಎರಡು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳಿಗೆ ಬಿಡ್ಡಿಂಗ್ ಮಾಡಲಿದೆ.ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕ್ರಿಸ್ಟಿಯಾನೋ ರೊನಾಲ್ಡೊ ಅವರ ಮ್ಯಾಂಚೆಸ್ಟರ್ ಯುನೈಟೆಡ್‌ನೊಂದಿಗೆ ಐಪಿಎಲ್ ತಂಡವನ್ನು ಹೊಂದಬಹುದು ಎನ್ನಲಾಗಿದೆ.

 

ಐಪಿಎಲ್ ಪ್ರಾರಂಭವಾದಾಗಿನಿಂದಲೂ ಇದು ಬಾಲಿವುಡ್ ಜೊತೆಗಿನ ನಂಟನ್ನು ಮುಂದುವರೆಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ ಸಹ ಮಾಲೀಕತ್ವ ಹೊಂದಿದ್ದರೆ, ಪ್ರೀತಿ ಜಿಂಟಾ ಪಂಜಾಬ್ ಕಿಂಗ್ಸ್ ನ ಸಹ ಮಾಲೀಕರಾಗಿದ್ದಾರೆ. ಈ ಹಿಂದೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಕೂಡ ರಾಜಸ್ಥಾನ ರಾಯಲ್ಸ್‌ನಲ್ಲಿ ಷೇರುಗಳನ್ನು ಹೊಂದಿದ್ದರು.

ದೀಪಿಕಾ ಕ್ರೀಡಾ ಉತ್ಸಾಹಿಯಾಗಿದ್ದು. ಆಕೆಯ ತಂದೆ ಪ್ರಕಾಶ್ ಪಡುಕೋಣೆ ಹೆಸರಾಂತ ಬ್ಯಾಡ್ಮಿಂಟನ್ ಆಟಗಾರ, ರಣವೀರ್ ಎನ್ಬಿಎದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅವರು ಇಂಗ್ಲೀಷ್ ಪ್ರೀಮಿಯರ್ ಲೀಗ್ ನಲ್ಲೂ ಭಾಗಿಯಾಗಿದ್ದಾರೆ.

ಅದಾನಿ ಗ್ರೂಪ್, ಆರ್‌ಪಿಜಿ ಸಂಜೀವ್ ಗೋಯೆಂಕಾ ಗ್ರೂಪ್, ಪ್ರಸಿದ್ಧ ಫಾರ್ಮಾ ಕಂಪನಿ ಟೊರೆಂಟ್ ಮತ್ತು ಪ್ರಮುಖ ತಂಡಗಳನ್ನು ಖರೀದಿಸಲು ಆಸಕ್ತಿ ತೋರಿದ ಸಂಸ್ಥೆಗಳಾಗಿವೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...