ಪುನೀತ್ ನಮನ ಕಾರ್ಯಕ್ರಮದ ಡೇಟ್ ಫಿಕ್ಸ್; ಅಭಿಮಾನಿಗಳಿಗೆ ನೋ ಎಂಟ್ರಿ!

Date:

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ಫಿಲಂ ಚೇಂಬರ್ ವತಿಯಿಂದ ಇದೇ 16ರಂದು ಅರಮನೆ ಮೈದಾನದಲ್ಲಿ ವಿಶೇಷ ಸಂಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಗೀತ ನಿರ್ದೇಶಕ ಗುರುಕಿರಣ್ ಪುನೀತ್‍ರಾಜ್‍ಕುಮಾರ್ ಅವರ ಚಿತ್ರದ ಹಾಡುಗಳನ್ನು ಹಾಡಲಿದ್ದಾರೆ.

ಬಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪುನೀತ್ ಅವರು ಕೊನೆಯದಾಗಿ ನನ್ನ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರೊಂದಿಗೂ ಬೆರೆತಿದ್ದರು. ಆ ಕ್ಷಣಗಳನ್ನು ಮರೆಯಲು ಆಗುತ್ತಿಲ್ಲ. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅವರಿಲ್ಲ ಎಂಬ ವಿಷಯ ತಿಳಿದು ಆಘಾತವಾಯಿತು.

ಮಾತೇ ಹೊರಡದೆ ಚಿಂತೆಗೊಳಗಾದೆ. ಅಪ್ಪು ಅವರೊಂದಿಗೆ ಕಳೆದ ಆ ಸುಮಧುರ ಕ್ಷಣಗಳು ಅವರ ಸೌಮ್ಯತೆ ಹಾಗೂ ಆದರ್ಶ ಗುಣಗಳನ್ನು ಎಂದೆಗೂ ಮರೆಯಲು ಸಾಧ್ಯವಿಲ್ಲ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದ್ದಾರೆ.

ಅವರು ವಾಸ್ತವವಾಗಿ ಇಲ್ಲವಾದರೂ ನಮ್ಮೊಂದಿಗೆ ಸದಾ ಇರುತ್ತಾರೆ. ಅವರಿಗೊಂದು ಭಾವಪೂರ್ಣ ನಮನ ಸಲ್ಲಿಸುವ ಸೌಭಾಗ್ಯ ನನಗೆ ಸಿಗುತ್ತಿದೆ. ಹಾಡಿನ ಮೂಲಕ ಅವರಿಗೆ ನಮನ ಸಲ್ಲಿಸುವ ಒಂದು ವಿಶೇಷ ಕಾರ್ಯಕ್ರಮವನ್ನು ಚಿತ್ರರಂಗದ ಗಣ್ಯರು ಮಾಡುತ್ತಿದ್ದಾರೆ ಎಂದರು.

ಹೀಗೆ ದೊಡ್ಡಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಅಭಿಮಾನಿಗಳಿಗೆ ಪ್ರವೇಶವಿರುವುದಿಲ್ಲ ಎನ್ನಲಾಗುತ್ತಿದೆ. ಕೇವಲ ಚಿತ್ರರಂಗದ ಕಲಾವಿದರಿಗೆ ಮಾತ್ರ ಈ ಕಾರ್ಯಕ್ರಮದಲ್ಲಿ ಅವಕಾಶವನ್ನು ನೀಡಲಾಗುತ್ತದೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...