ದೇಶದಾದ್ಯಂತ ದೀಪಾವಳಿಯ ಆಚರಣೆ ಜೋರಾಗಿದೆ. ಪುನೀತ್ ರಾಜ್ ಕುಮಾರ್ ನಿಧನದ ನೋವಿನಲ್ಲಿಯೇ ಕನ್ನಡಿಗರು ಬೆಳಕಿನ ಹಬ್ಬ ದೀಪಾವಳಿಯನ್ನು ಹೆಚ್ಚೇನೂ ಸಡಗರ ಇಲ್ಲದೆ ಆಚರಿಸುತ್ತಿದ್ದಾರೆ. ಇದರ ನಡುವೆಯೂ ಹಲವಾರು ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿ, ಜಾಗ್ರತೆಯಿಂದ ಆಚರಿಸಿ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.
दीपज्योतिः परब्रह्म दीपज्योतिर्जनार्दनः ।
दीपो हरतु मे पापं दीपज्योतिर्नमोऽस्तुते ॥Wishing you a very happy Diwali. pic.twitter.com/wtsSSf2rBp
— Venkatesh Prasad (@venkateshprasad) November 4, 2021
ಇದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಂಪೂರ್ಣ ಹಿಂದಿ ಭಾಷೆಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವುದರ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ವೆಂಕಟೇಶ್ ಪ್ರಸಾದ್ ಓರ್ವ ಕನ್ನಡಿಗನಾಗಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಕಡೆಗಣಿಸಿ ಹಿಂದಿಯಲ್ಲಿ ದೀಪಾವಳಿಯ ಶುಭಾಶಯಗಳನ್ನು ಕೋರುವ ಅಗತ್ಯವಾದರೂ ಏನಿತ್ತು ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಮೂಡುತ್ತಿದೆ.