ಹಾಗೆ ಮಾಡ್ಬೇಡಿ ನಿಮ್ಮ ಕಾಲಿಗೆ ಬೀಳ್ತೀನಿ: ರಾಘವೇಂದ್ರ ರಾಜಕುಮಾರ್

Date:

ಮೊದಲೇ ನಾವು ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡುತ್ತೇನೆ. ಆತ್ಮಹತ್ಯೆ ಅಂತಹ ಕೃತ್ಯಕ್ಕೆ ಕೈ ಹಾಕಿ ನಮಗೆ ಮತ್ತಷ್ಟು ನೋವು ಕೊಡಬೇಡಿ. ಪುನೀತ್‍ಗೆ ಕೆಟ್ಟ ಹೆಸರು ತರಬೇಡಿ ಎಂದು ನಟ ರಾಘವೇಂದ್ರ ರಾಜ್‍ಕುಮಾರ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿಕೆಯಿಂದಾಗಿ ಮನನೊಂದು ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದದ ಜೊತೆ ಮಾತನಾಡಿದ ಅವರು, ಅಭಿಮಾನಿಗಳು ದೇವರು ಅಂತ ಅಪ್ಪಾಜಿ ಹೇಳುತ್ತಾರೆ. ದೇವರುಗಳಾದ ನೀವು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ನಾವು ಈಗಾಗಲೇ ನೋವಿನಲ್ಲಿ ಇದ್ದೇವೆ, ಪುನೀತ್ ಕೆಟ್ಟ ಹೆಸರು ತರಬೇಡಿ ಮತ್ತು ನಿಮ್ಮ ತಂದೆ-ತಾಯಿಗೆ ನೋವು ಕೊಡಬೇಡಿ. ಒಬ್ಬರ ಹಿಂದೆ ಒಬ್ಬರು ಹೋದರೆ ಭೂಮಿ ಮೇಲೆ ಯಾರು ಇರಲ್ಲ. ಸಣ್ಣ ಮಕ್ಕಳಿಗೆ ಇದನ್ನೇ ಹೇಳಿಕೋಡ್ತೀರಾ. ನಿಮ್ಮ ಪಾದಕ್ಕೆ ನಮಸ್ಕರಿಸುತ್ತೇನೆ ದುಡುಕಿನ ನಿರ್ಧಾರ ಮಾಡಬೇಡಿ ಎಂದು ಹೇಳಿದ್ದಾರೆ.

ಇದೇ ವೇಳೆ ಪುನೀತ್ 11ನೇ ಪುಣ್ಯಾರಾಧನೆ ದಿನದ ಕಾರ್ಯಕ್ರಮದ ಪ್ಲಾನ್ ಆಗುತ್ತಿದೆ. ಪ್ಲಾನ್ ಏನು ಎಂಬುವುದರ ಬಗ್ಗೆ ನಂತರದ ದಿನಗಳಲ್ಲಿ ಹೇಳುತ್ತೇನೆ. ಸದ್ಯ ಅಪ್ಪು ಸಮಾಧಿ ಬಳಿಗೆ ದಿನ ಹೋಗುತ್ತಿದ್ದೇನೆ. ಅಪ್ಪು ಸಮಾಧಿ ವೀಕ್ಷಿಸಲು ಅಭಿಮಾನಿಗಳು ಬರುತ್ತಿದ್ದಾರೆ. ಅಭಿಮಾನಿಗಳಲ್ಲಿ ನಾವು ಬೇಡಿಕೊಳ್ಳುತ್ತೇನೆ, ಅಪ್ಪು ಪತ್ನಿ ಅಶ್ವಿನ ಅವರು ಕೂಡ ನೊಂದು ಕೊಂಡಿದ್ದಾರೆ. ದಯವಿಟ್ಟು ಯಾರು ದುಡುಕಬಾರದು ಅನಾಹುತ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...