No menu items!
16.9 C
Munich
Monday, June 15, 2026

ಆತ್ಮಹತ್ಯೆ ಮಾಡಿಕೊಂಡ ಅಪ್ಪು ಅಭಿಮಾನಿ ಮನೆಗೆ ಭೇಟಿ ಕೊಟ್ಟ ರಾಘಣ್ಣ

Must read

ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪುನೀತ್‌ ರಾಜಕುಮಾರ್ ಅಭಿಮಾನಿ ವೆಂಕಟೇಶ್‌ (25) ಮನೆಗೆ ನಟ ರಾಘವೇಂದ್ರ ರಾಜಕುಮಾರ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪುನೀತ್‌ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೆಂಕಟೇಶ್‌ ಇದೇ 4ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ಅವರ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದರು. ಅದನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವುಳ್ಳವರಿಗೆ ಕಸಿ ಮಾಡಲಾಗಿತ್ತು.

ವಿಷಯ ತಿಳಿದು ಭಾನುವಾರ ಎಲೆಕೇರಿಗೆ ಬಂದ ರಾಘವೇಂದ್ರ ರಾಜಕುಮಾರ್ ಅರ್ಧ ಗಂಟೆಗೂ ಹೆಚ್ಚು ಕಾಲ ವೆಂಕಟೇಶ್‌ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ನಿಮ್ಮ ಜೊತೆಗೆ ನಾವಿದ್ದೀವಿ, ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article