ಮಾಸಾಂತ್ಯದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸುವ ಸಾಧ್ಯತೆ ಇದ್ದು, ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್ ಪ್ರವೇಶಸಿದ್ದರೆ, ಭಾರತ ಸೂಪರ್ 12 ಲೀಗ್ ಹಂತದಲ್ಲೇ ಹೊರಬಿದ್ದಿದೆ.
ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದ ಹಿನ್ನೆಲೆಯಲ್ಲಿ ನಾಯಕ ಸ್ಥಾನಕ್ಕೆ ರೋಹಿತ್ ಶರ್ಮ ಹೆಸರು ಚಾಲ್ತಿಯಲ್ಲಿದೆ. ಅಲ್ಲದೇ ಕೆಎಲ್ ರಾಹುಲ್ ಉಪನಾಯಕ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಹಿರಿಯ ವೇಗಿ ಜಸ್ ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರಿಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು, ಆರ್ ಸಿಬಿ ತಂಡದಲ್ಲಿ ಮಿಂಚಿದ ಹರ್ಷಲ್ ಪಟೇಲ್ ಗೆ ಸ್ಥಾನ ದೊರೆಯಬಹುದು.