ನಟ ಪುನೀತ್ ರಾಜ್‌ಕುಮಾರ್ ಅವ್ರಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇನ್ನು ಇದೇ ಸಮಯದಲ್ಲಿ ಅಪ್ಪು ಅವ್ರು ಸಮಾಧಿಯನ್ನ ತಂದೆ ರಾಜ್‌ಕುಮಾರ್ ಅವ್ರ ಮಾದರಿಯಲ್ಲಿಯೇ ನಿರ್ಮಿಸುವುದಾಗಿ ಭರವಸೆ ನೀಡಿದರು.
ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮವನ್ನ ಹಮ್ಮಿಕೊಂಡಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು, ‘ನಟ ಪುನೀತ್ ರಾಜ್‌ಕುಮಾರ್ ಅವರ ಸ್ಮಾರಕದ ನಿರ್ಮಾಣವನ್ನ ನಟ ರಾಜ್‌ಕುಮಾರ್ ಅವ್ರ ಸ್ಮಾರಕರ ಮಾದರಿಯಲ್ಲಿಯೇ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಕುಟುಂಬಸ್ಥರು ಸೇರಿ ಮತ್ತಷ್ಟು ಸಂಪುಟದ ಜೊತೆ ಚರ್ಚಿಸಲಾಗುವುದು’ ಎಂದರು.