No menu items!
12.4 C
Munich
Wednesday, April 29, 2026

ಪುನೀತ್ ಅಭಿಮಾನಿಗಳಿಗೆ ಸಾ.ರಾ. ಗೋವಿಂದು ಸಿಹಿಸುದ್ದಿ

Must read

ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿಂದ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.

ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸುದ್ದಿಯೊಂದು ಹೊರಬಿದ್ದಿದೆ.

 

ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ ಬೇರೊಂದು ದಿನ ಅಭಿಮಾನಿಗಳಿಗಾಗಿಯೇ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ನಿರ್ಮಾಪಕ ಸಾ.ರಾ.ಗೋವಿಂದು ತಿಳಿಸಿದ್ದಾರೆ.

ಪುನೀತ್ ಅಭಿಮಾನಿಗಳಿಗಾಗಿಯೇ ಬೇರೊಂದು ಕಾರ್ಯಕ್ರಮವನ್ನು ಬೆಂಗಳೂರು, ಹುಬ್ಬಳ್ಳಿ ಅಥವಾ ದಾವಣಗೆರೆಯಲ್ಲಿ ನಡೆಸಲು ಚಿಂತನೆ ನಡೆದಿದೆ. ಈ ಬಗ್ಗೆ ರಾಜ್ ಕುಟುಂಬ ಹಾಗೂ ಚಿತ್ರರಂಗದೊಂದಿಗೆ ಚರ್ಚಿಸಿ ಯಾವಾಗ ಕಾರ್ಯಕ್ರಮ ನಡೆಸಬೇಕು ಎಂಬ ಬಗ್ಗೆ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article