ಎಸ್‌ಎಸ್‌ಎಲ್ ಸಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಅಪ್ರಾಪ್ತೆ ಬಾಲಕಿಗೆ ಮಗು ನೀಡಿದ ಕಾರಣಕ್ಕೆ ಉಪ್ಪಿನಂಗಡಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
10ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ವೈದ್ಯರು ಪರೀಕ್ಷೆ ನಡೆಸಿದಾಗ ವಿಧ್ಯಾರ್ಥಿನಿ ಗರ್ಭಿಣಿ ಎಂದು ತಿಳಿದು ಬಂದಿದೆ. ನಂತರ ಈಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.