ಆಟೋ ಚಾಲಕನ ಪ್ರೀತಿಯ ಬಲೆಯಲ್ಲಿ ಬಿದ್ದ ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ಇದೀಗ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ವಂಚಿಸಿರುವ ಆರೋಪದ ಮೇಲೆ ಪ್ರಿಯಕರನ ವಿರುದ್ಧ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ.
ಆಟೋ ಚಾಲಕನಾಗಿ ಕೆಲಸ ಮಾಡುತ್ತಿರುವ ರಾಟ್ಲವತ್ ಶಂಕರ್ (24) ಹೈದರಾಬಾದ್ನ ಚಂಪಪೇಟ್ ನಿವಾಸಿ. ಹಯಾತ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿ.ಟೆಕ್ ವಿದ್ಯಾರ್ಥಿನಿ ವಾಸವಿದ್ದಳು. ಅಲ್ಲದೆ, ಆಕೆ ಆಟೋ ಚಾಲಕನ ಸ್ನೇಹಿತನ ತಂಗಿಯಾಗಿದ್ದು, ಇಬ್ಬರ ನಡುವೆ ಪರಿಚಯವಾಗಿತ್ತು. ದಿನ ಕಳೆದಂತೆ ಪರಿಚಯ ಸ್ನೇಹಕ್ಕೆ ತಿರುಗಿತ್ತು.
ಆಗಾಗ ಭೇಟಿ ಮಾಡುವುದು ಸಾಮಾನ್ಯವಾಗಿತ್ತು. ಹೀಗೆ ಒಂದು ದಿನ ಶಂಕರ್, ವಿದ್ಯಾರ್ಥಿನಿ ಮುಂದೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆಕೆಯು ಕೂಡ ಸಮ್ಮತಿ ಸೂಚಿಸಿದ್ದಳು. ಇಬ್ಬರು ಆಗಾಗ ಹೊರಗಡೆ ಸುತ್ತಾಡುವುದು ಮಾಡುತ್ತಿದ್ದರು. ಇಬ್ಬರ ನಡುವೆ ಸಲುಗೆ ಬೆಳೆದಂತೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು. ಇದೀಗ ಶಂಕರ್ ತನ್ನ ವರಸೆಯನ್ನೇ ಬದಲಿಸಿದ್ದಾನೆ. ಮದುವೆ ಮಾಡಿಕೊಳ್ಳಲು ನಿರಾಕರಿಸುತ್ತಿದ್ದು, ಮದುವೆ ಆಗುವ ಯಾವುದೇ ಉದ್ದೇಶ ನನಗಿರಲಿಲ್ಲ ಎನ್ನುತ್ತಿದ್ದಾನೆ. ತಾನು ಮೋಸ ಹೋಗಿರುವುದು ವಿದ್ಯಾರ್ಥಿನಿಗೆ ಮನವರಿಕೆ ಆಗಿದ್ದು, ಹಯಾತ್ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಶಂಕರ್ ಪತ್ತೆಗೆ ಬಲೆ ಬೀಸಿದ್ದಾರೆ