ರಾಜ್ಯದಲ್ಲಿ ಬೀಳುತ್ತಿರುವ ಅಕಾಲಿಕ ಮಳೆಗೆ ಜನರು ರೋಸಿ ಹೋಗಿದ್ದಾರೆ.
ಸಾಮಾನ್ಯವಾಗಿ ದೀಪಾವಳಿ ಹಬ್ಬದ ಬಳಿಕ ಮಳೆಯಾಗೋದು ತೀರಾ ಅಪರೂಪ.
ಇಂತಹ ಪರಿಸ್ಥಿತಿಯಲ್ಲಿ ಈ ಬಾರಿ ದೀಪಾವಳಿ ಕಳೆದರೂ ವರುಣ ಆರ್ಭಟಿಸುತ್ತಿದ್ದಾರೆ. ಇದರಿಂದ ಜನರು ಹೈರಾಣಾಗಿದ್ದಾರೆ.
ಈ ಮಧ್ಯೆ ಜನರಿಗೆ ಬ್ಯಾಡ್ ನ್ಯೂಸ್ ಎಂಬಂತೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಗಳಿವೆ ಎಂದಿರುವ ಹವಾಮಾನ ಇಲಾಖೆ, ನವೆಂಬರ್ 26ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಬರಲಿದೆ.
ಹೀಗಾಗಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.
ಅದರಲ್ಲೂ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.