ಶವಾಗಾರದಲ್ಲಿ ಎದ್ದು ಕುಳಿತ ವ್ಯಕ್ತಿ!

Date:

ಸಿನಿಮಾಗಳ ದೃಶ್ಯದಂತೆ ಸತ್ತಿದ್ದ ವ್ಯಕ್ತಿಯ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಎಂಬಲ್ಲಿ ನಡೆದಿದೆ.

ಶ್ರೀಕೇಶ್ ಕುಮಾರ್ ಎಂಬ ವ್ಯಕ್ತಿ ಎಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುತ್ತಿದ್ದ.

ಬೈಕಿನಲ್ಲಿ ವೇಗವಾಗಿ ತೆರಳುತ್ತಿದ್ದಾಗ ಆಕ್ಸಿಡೆಂಟ್ ಆಗಿ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.

ಅಲ್ಲಿ ಆತನನ್ನು ಸತ್ತಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿಲಾಯಿತು.

ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು. ಈ ಸಂದರ್ಭದಲ್ಲಿ ಅಲ್ಲಿ ಹಾಜರಿದ್ದ ಸಂಬಧಿಕರಲ್ಲಿ ಒಬ್ಬಳು ಹುಡುಗಿ ಮೃತದೇಹದಲ್ಲಿ ಚಲನೆಯನ್ನು ಗುರುತಿಸಿದ್ದಳು. ನಂತರ ಆತ ಜೀವಂತ ಇರುವುದು ಪತ್ತೆಯಾಗಿತ್ತು. ನಂತರ ಸೂಕ್ತ ಶುಶ್ರೂಷೆ ಮಾಡಿದನಂತರ ಆತ ಎದ್ದು ಕೂತ ಎಂದು ತಿಳಿದು ಬಂದಿದೆ.

ಆಸ್ಪತ್ರೆಯಲ್ಲಿ ಹಾಜರಿದ್ದ ಮೆಡಿಕಲ್ ಆಫೀಸರ್ ದೇಹವ ತಪಾಸಣೆ ನಡೆಸಿದಾಗ ಹೃದಯ ಬಡಿತ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂಥ ಘಟನೆಗಳು ನಡೆಯುವುದು ಅಪರೂಪ. ಈ ಘಟನೆ ನಿರ್ಲಕ್ಷ್ಯದಿಂದ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...