ಹಂಸಲೇಖ ಸ್ಥಿತಿ ಗಂಭೀರನಾ? ಇಲ್ಲಿದೆ ಸತ್ಯಾಂಶ

Date:

ಅನಾರೋಗ್ಯದ ಬಗ್ಗೆ ಉಂಟಾದ ಊಹಾಪೋಹದ ಹಿನ್ನೆಲೆಯಲ್ಲಿ ಖುದ್ದು ಹಂಸಲೇಖಾ ರಾಜ್ಯದ ಜನತೆಗೆ, ತಮ್ಮ ಅಭಿಮಾನಿಗಳಿಗೆ ಪತ್ರ ಬರೆದು ತಾವು ಆರೋಗ್ಯವಾಗಿದ್ದೀನಿ ಎಂದಿದ್ದಾರೆ.

ಪತ್ರದಲ್ಲಿ ಅವರು, ‘ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ.

ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ.ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು. ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು, ಹಾಡು ಕೇಳಿಸುತ್ತದೆ. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು. ನಿಮ್ಮ ಹಂಸಲೇಖ”

ಎಂದು ಬರೆದುಕೊಂಡಿದ್ದಾರೆ.ಇತ್ತೀಜಿಗೆ ಪೇಜಾವರ ಸ್ವಾಮೀಜಿಗಳ ಬಗ್ಗೆ ಹಂಸಲೇಖ ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದ್ದವು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...