ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ವೈರಸ್ ಸ್ಪೋಟವಾಗಿದ್ದು, ಮುಂಬೈನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಧೃಡವಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 10 ಕ್ಕೇರಿದೆ.
ಹೌದು, ಮುಂಬೈನಲ್ಲಿ ಮತ್ತೆ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 23 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತದಲ್ಲಿ ಹೊಸ ಕೊರೊನಾ ರೂಪಾಂತರಿ ( OMICRON VIRUSE) ದೇಶದ ಜನರನ್ನು ಬೆಚ್ಚಿ ಬೀಳಿಸಿದ್ದು, ಮಾಹಿತಿಗಳ ಪ್ರಕಾರ 23 ಮಂದಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಧೃಡವಾಗಿದೆ.
ಹೌದು, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸದ್ಯದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 2, ಗುಜರಾತ್ ನಲ್ಲಿ 1, ಮುಂಬೈನಲ್ಲಿ 10, ದೆಹಲಿಯಲ್ಲಿ 1 ಮತ್ತು ರಾಜಸ್ಥಾನದಲ್ಲಿ 9 ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 23 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.