ಸಿಹಿಸುದ್ದಿ: ವಾರದಲ್ಲಿ 4 ದಿನ ಕೆಲಸದ ಪದ್ಧತಿ ಶೀಘ್ರದಲ್ಲೇ ಜಾರಿ

Date:

ವಾರದಲ್ಲಿ ನಾಲ್ಕು ದಿನ ಕೆಲಸ ಮಾಡುವ ಪದ್ಧತಿ ಮುಂದಿನ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ನೂತನ ಕಾರ್ಮಿಕ ಸಂಹಿತೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸುವ ಸಾಧ್ಯತೆ ಇದ್ದು, ಇದು ಜಾರಿಯಾದಲ್ಲಿ ವಾರದಲ್ಲಿ ನಾಲ್ಕು ದಿನ ಕೆಲಸದ ಪದ್ದತಿ ಆಯ್ಕೆಗೆ ಅವಕಾಶ ಇರುತ್ತದೆ.

ಉದ್ಯೋಗಿಗಳ ವೇತನದಲ್ಲಿ ಬದಲಾವಣೆಯಾಗುತ್ತದೆ. ನೌಕರರು ತಮಗೆ ಅನುಕೂಲವಾಗುವಂತೆ ವಾರದಲ್ಲಿ ನಾಲ್ಕು, ಐದು ಅಥವಾ ಆರು ದಿನಗಳ ಕೆಲಸದ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ, ವಾರದಲ್ಲಿ ಒಟ್ಟು 48 ಗಂಟೆಗಳ ಕೆಲಸ ಮಾಡುವುದು ಅಗತ್ಯವಾಗಿರುತ್ತದೆ. ಸರ್ಕಾರಿ, ಖಾಸಗಿ ಮತ್ತು ಸಂಘಟಿತ ವಲಯಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ಜಪಾನ್, ನ್ಯೂಜಿಲೆಂಡ್, ಸ್ಪೇನ್ ಮೊದಲಾದ ದೇಶಗಳಲ್ಲಿ ವಾರಕ್ಕೆ ನಾಲ್ಕು ದಿನಗಳ ಮಾದರಿಯ ಕೆಲಸದ ಪದ್ಧತಿಯಿದೆ. ಕಾರ್ಮಿಕ ವಲಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುತ್ತದೆ. 2022 -23ರಲ್ಲಿ ಕಾರ್ಮಿಕ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ಕನಿಷ್ಠ 13 ರಾಜ್ಯಗಳು ಕರಡು ನಿಯಮಗಳನ್ನು ಪ್ರಕಟಿಸಿವೆ. 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಾಗಿ ಸಂಯೋಜನೆ ಮಾಡಲಾಗಿದ್ದು, ವೇತನ, ಸಾಮಾಜಿಕ ಭದ್ರತೆ, ಕೈಗಾರಿಕೆ ಸಂಬಂಧ ಮತ್ತು ಔದ್ಯೋಗಿಕ ಸುರಕ್ಷತೆಯನ್ನು ಇದು ಒಳಗೊಂಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ, ಖಾಸಗಿ ವಲಯ, ಸಂಘಟಿತ ವಲಯಗಳಿಗೆ ಕಾರ್ಮಿಕರ ಸಂಹಿತೆ ಅನ್ವಯವಾಗಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...