ಹುಷಾರ್, ರಾತ್ರಿ 10ರ ಹೊರ ಬಂದ್ರೆ ಬೀಳುತ್ತೆ ಕೇಸ್!

Date:

ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ 10 ದಿನಗಳ ನೈಟ್ ಕಫ್ರ್ಯೂ ಇಂದಿನಿಂದ ಜಾರಿಯಲ್ಲಿದ್ದು, ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ.

ಅಗತ್ಯ ಸೇವೆಗಳಾದ ಹಾಲು, ಹಣ್ಣು, ತರಕಾರಿ, ವೈದ್ಯಕೀಯ, ಸರಕು ಸಾಗಾಣಿಕೆ ಸೇರಿದಂತೆ ತುರ್ತು ಸೇವೆಗಳು ಯಥಾಸ್ಥಿತಿಯಲ್ಲಿ ಇರಲಿವೆ. ಖಾಸಗಿ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು ಗುರುತಿನ ಚೀಟಿಯನ್ನು ಪ್ರದರ್ಶಿಸಿ ಪ್ರಯಾಣಿಸಬಹುದು.

ಒಂದು ವೇಳೆ ಅನಗತ್ಯವಾಗಿ ತಿರುಗಾಟ ನಡೆಸಿದರೆ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸಲು ಸರ್ಕಾರ ಗೃಹ ಇಲಾಖೆಗೆ ನಿರ್ದೇಶನ ನೀಡಿದೆ. ಸಭೆ-ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲಎಂಬ ನಿಯಮ ಕೂಡ ಅನ್ವಯವಾಗಲಿದೆ.

ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಡಿ.28ರಿಂದ ರಾತ್ರಿಯಿಂದ ಬರುವ ಜ.7ರ ಬೆಳಿಗ್ಗೆ 5 ಗಂಟೆವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅನಗತ್ಯ ಸುತ್ತಾಟ, ಜನ ಸೇರುವಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳು, ಬಾರ್, ಪಬ್, ರೆಸ್ಟೋರೆಂಟ್, ಚಲನಚಿತ್ರ ಮಂದಿರ ಸೇರಿದಂತೆ ಅಗತ್ಯ ಸೇವೆಯಲ್ಲದ ಯಾವುದೇ ವಾಣಿಜ್ಯ ಚಟುವಟಿಕೆಗೂ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸರ್ಕಾರದ ನಿಯಮಾನುಸಾರ 144 ಸೆಕ್ಷನ್ ಜಾರಿಯಲ್ಲಿರಲಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ನಿಬಂಧನೆಗಳೇನು?:
ನೈಟ್ ಕಫ್ರ್ಯೂ ವೇಳೆ ಅನಾರೋಗ್ಯ ಸಮಸ್ಯೆವುಳ್ಳವರು, ರೋಗಿಗಳು ಮತ್ತು ಅವರ ಪರಿಚಾರಕರು/ವ್ಯಕ್ತಿಗಳ ಓಡಾಟಕ್ಕೆ ತುರ್ತು ಅಗತ್ಯ ಸಂಚಾರಕ್ಕೆ ಅವಕಾಶ.ರಾತ್ರಿಯಲ್ಲಿ ಕೆಲಸ ನಿರ್ವಹಿಸುವ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಬಹುದು.
ಅಂತಹ ಸಂಸ್ಥೆಗಳ ಉದ್ಯೋಗಿಗಳು ಸಂಬಂತ ಸಂಸ್ಥೆ/ಸಂಸ್ಥೆಯಿಂದ ನೀಡಲಾದ ಗುರುತಿನ ಚೀಟಿ ತೋರಿಸಿ ಸಂಚಾರ ಮಾಡಬಹುದು.

ಟೆಲಿಕಾಂ ಮತ್ತು ಇಂಟರ್‍ನೆಟ್ ಸೇವಾ ಪೂರೈಕೆದಾರರ ಉದ್ಯೋಗಿಗಳು ಮತ್ತು ವಾಹನಗಳು ತಮ್ಮ ಸಂಸ್ಥೆಯಿಂದ ನೀಡಲಾದ ಗುರುತಿನ ಚೀಟಿಯನ್ನು ತೋರಿಸಬಹುದು. ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಆದಷ್ಟು ವರ್ಕ್ ಫ್ರಂ ಹೋಂ ಇದ್ದು, ಅಗತ್ಯ ಇದ್ದವರಷ್ಟೇ ಕಚೇರಿಗೆ ತೆರಳಬಹುದು. ಮೆಡಿಕಲ್ ಸೇರಿದಂತೆ ವೈದ್ಯಕೀಯ, ತುರ್ತು ಮತ್ತು ಅಗತ್ಯ ಸೇವೆಗಳು ಸಂಪೂರ್ಣವಾಗಿ ಕಾರ್ಯ ನಿರ್ವಹಿಸಲು ಅವಕಾಶ ಇದೆ. ಇತರ ವಾಣಿಜ್ಯ ಚಟುವಟಿಕೆಗಳನ್ನು ನಿಷೇಸಲಾಗಿದೆ.

ಎಲ್ಲಾ ರೀತಿಯ ಸರಕುಗಳ ಸಾಗಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಟ್ರಕ್‍ಗಳು, ಸರಕು ವಾಹನಗಳು ಅಥವಾ ಖಾಲಿ ಸೇರಿದಂತೆ ಯಾವುದೇ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ಇದೆ. ಹೋಮ್ ಡೆಲಿವರಿ ಮತ್ತು ಇ-ಕಾಮರ್ಸ್‍ನ ಕಂಪನಿಗಳನ್ನು ಅನುಮತಿಸಲಾಗಿದೆ. ಬಸ್‍ಗಳು, ರೈಲುಗಳು, ಮೆಟ್ರೋ ರೈಲು ಸೇವೆಗಳು ಮತ್ತು ವಿಮಾನ ಪ್ರಯಾಣಕ್ಕೂ ಅನುಮತಿಸಲಾಗಿದೆ.

ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟ ವಿಮಾನ ನಿಲ್ದಾಣಗಳು, ಬಸ್ ಟರ್ಮಿನಲ್‍ಗಳು/ಬಸ್ ನಿಲ್ದಾಣ, ರೈಲು ನಿಲ್ದಾಣಗಳು ಇತ್ಯಾದಿಗಳಿಗೆ ವಿಮಾನ, ರೈಲು ಮತ್ತು ರಸ್ತೆಯ ಮೂಲಕ ಪ್ರಯಾಣಿಕರ ಓಡಾಟಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ ಪ್ರಯಾಣ ದಾಖಲೆಗಳು/ಟಿಕೆಟ್‍ಗಳನ್ನು ಪ್ರದರ್ಶಿಸಿದರೆ ಮಾತ್ರ ಅವಕಾಶವಿದೆ.

ಡಿ.30ರಿಂದ ಜ.2ರವರೆಗೆ ರೆಸ್ಟೋರೆಂಟ್‍ಗಳು/ಹೋಟೆಲ್‍ಗಳು/ಕ್ಲಬ್‍ಗಳು/ಪಬ್‍ಗಳಲ್ಲಿ ಶೇ.50 ರಷ್ಟು ಮಾತ್ರ ಆಸನ ವ್ಯವಸ್ಥೆ ಮಾಡಬೇಕು.
ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ನೆಗಟಿವ್ ರಿಪೋರ್ಟ್ ಹೊಂದಿರಬೇಕು ಮತ್ತು 2 ಡೋಸ್ ಲಸಿಕೆ ಪಡೆದಿರಬೇಕು. ಡಿ. 28ರಿಂದ ಎಲ್ಲಾ ಸಭೆಗಳು, ಸಮ್ಮೇಳನಗಳು, ಮದುವೆಗಳು ಸೇರಿದಂತೆ ಭಾಗವಹಿಸುವವರ ಸಂಖ್ಯೆಯನ್ನು 300 ಜನರಿಗೆ ಮಾತ್ರ ಸೀಮಿತಗೊಳಿಸಬೇಕು.

ರಾಜ್ಯದಲ್ಲಿ ಕೋವಿಡ್ 19, ವಿಶೇಷವಾಗಿ ಓಮಿಕ್ರಾನ್ ರೂಪಾಂತರ ಹರಡುವುದನ್ನು ತಡೆಗಟ್ಟಲು ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಗೆ ಹೊಂದಿಕೊಂಡಿರುವ ಎಲ್ಲಾ ಗಡಿ ಜಿಲ್ಲೆಗಳಲ್ಲಿ ತೀವ್ರ ಗಸ್ತು ಮತ್ತು ಕಣ್ಗಾವಲಿಡುವಂತೆ ಸೂಚಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...