ಮೀಟೂ: ಶೃತಿ ಹರಿಹರನ್ ವಿರುದ್ಧ ಗೆದ್ದ ಅರ್ಜುನ್ ಸರ್ಜಾ

Date:

ಅರುಣ್​ ವೈದ್ಯನಾಥನ್​ ನಿರ್ದೇಶನದ ‘ವಿಸ್ಮಯ’ ಸಿನಿಮಾದಲ್ಲಿ ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು.

2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು. ತಮ್ಮ ಜತೆ ಅರ್ಜುನ್​ ಸರ್ಜಾ (Arjun Sarja) ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ (B Report) ಸಲ್ಲಿಸಿದ್ದರು. ಈ ವರದಿಗೆ ಶ್ರುತಿ ಹರಿಹರನ್​ ಆಕ್ಷೇಪಣೆ ಸಲ್ಲಿಸಿಲ್ಲ. ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ, ಪ್ರಕರಣದಲ್ಲಿ ಅರ್ಜುನ್​ ಸರ್ಜಾಗೆ ಗೆಲುವಾಗಿದೆ.

ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಈಗ ನ್ಯಾಯಾಲಯ ಈ ವರದಿಯನ್ನು ಒಪ್ಪಿರುವುದರಿಂದ ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾದಂತಾಗಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...