ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜಿನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಅಭಿಯಾನದ ಮೂಲಕ ಕಾಂಗ್ರೆಸ್ ಸೇರಿದವರ ಸಂಖ್ಯೆ ಹೆಚ್ಚೋ ಅಥವಾ ಕಾಂಗ್ರೆಸ್ ತ್ಯಜಿಸಲಿರುವವರ ಸಂಖ್ಯೆ ಹೆಚ್ಚೋ? ಡಿಜಿಟಲ್ ಅಭಿಯಾನದಲ್ಲಿ ಲಕ್ಷ ಲಕ್ಷ ಸದಸ್ಯರು ಸೇರ್ಪಡೆಯಾಗಿದ್ದಾರೆ ಎಂದು ಅಂಕೆ-ಸಂಖ್ಯೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್ ಅವರೇ, ಈಗ ಅನೇಕರು ಪಕ್ಷ ತ್ಯಜಿಸುತ್ತಿದ್ದು, ನಾಳೆ ನಡೆಯಲಿರುವ ರಾಜ್ಯ ಚಿಂತನ ಶಿಬಿರದಲ್ಲಿ ಮುಂದೆ ಪಕ್ಷ ತ್ಯಜಿಸುವವರಿಗಾಗಿ ಹೊಸ ಅಭಿಯಾನ ಘೋಷಿಸುವಿರಾ? ಎಂದು ಲೇವಡಿ ಮಾಡಿದೆ. ಕಪಿಲ್ ಸಿಬಲ್, ಆರ್ ಪಿಎನ್ ಸಿಂಗ್, ಅಶ್ವಿನಿ ಕುಮಾರ್, ಹಾರ್ದಿಕ್ ಪಟೇಲ್, ಸಿಎಂ ಇಬ್ರಾಹಿಂ, ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಚಂದ್ರು, ಈಗ ಬ್ರಿಜೇಶ್ ಕಾಳಪ್ಪ! ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಕಾಂಗ್ರೆಸ್ ಛೋಡೋ ಅಭಿಯಾನವೋ? ಕಾಂಗ್ರೆಸ್ ಪಕ್ಷ ಯಾವ ದಯನೀಯ ಸ್ಥಿತಿ ತಲುಪಿದೆ ಎಂದರೆ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಸಂಖ್ಯೆ ತೋರಿಸಲು ಟಿವಿ, ಫ್ರಿಡ್ಜ್, ಫೋನ್ ಆಮಿಷ ಒಡ್ಡಲಾಗಿತ್ತು. ಈಗ ಹತ್ತಾರು ವರ್ಷ ಕಾಂಗ್ರೆಸ್ ಪಕ್ಷಕ್ಕೆ ದುಡಿದವರು ಪಕ್ಷ ತ್ಯಜಿಸುತ್ತಿದ್ದಾರೆ. ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾರ್ಯಕರ್ತರೇ ಬೇಸತ್ತಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ಡಿ.ಕೆ ಶಿವಕುಮಾರ್ ಗೆ ಬಿಜೆಪಿ ತಿರುಗೇಟು
Date: