ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಾಕ್ಷಿಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆಯಾಗಿ ಆರೋಪಿಗಳ ಪರ ವಕೀಲರು ತನಿಖೆಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಪಟ್ಟಿಯನ್ನು ನೀಡುವಂತೆ ಮನವಿ ಮಾಡಿದರು. ಈ ಮನವಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ ಎಂದಿದ್ದು, ವಿಚಾರಣೆಯನ್ನು ನ್ಯಾಯಾಲಯ ಜೂನ್ 6ಕ್ಕೆ ಮುಂದೂಡಿದೆ.