ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು

Date:

ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ಮಹತ್ವದ ಸಭೆ ನಡೆಸಿದೆ. ಯಾವ ಶಾಸಕ ಯಾವ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮತಗಳ ಹಂಚಿಕೆ ಮಾಡಲಾಗಿದೆ. ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದಲ್ಲಿ ಮೂರನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನ ನಡೆಸಲು ನಿರ್ಧರಿಸಲಾಗಿದೆ.

 

 

ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

 

 

 

ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಗೆಲುವಿನ ಲೆಕ್ಕಾಚಾರ ನಡೆಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ತಮ್ಮ ಮೂವರು ಅಭ್ಯರ್ಥಿಗಳಿಗೆ ಮತಗಳ ವಿಂಗಡಣೆ ಮಾಡಿದರು.

 

 

ಉಸ್ತುವಾರಿ ಅರುಣ್ ಸಿಂಗ್ ಮತ್ತು ವೀಕ್ಷಕ ಕಿಶನ್ ರೆಡ್ಡಿ ಜೊತೆ ಸಮಾಲೋಚನೆ ನಡೆಸಿ ಪ್ರತಿಯೊಬ್ಬ ಅಭ್ಯರ್ಥಿಗೂ ಮತಗಳ ವಿಂಗಡಣೆ ಮಾಡಲಾಗಿದ್ದು, ಯಾವ ಅಭ್ಯರ್ಥಿಗೆ ಯಾವ ಶಾಸಕರು ಮತದಾನ ಮಾಡಬೇಕೆಂದು ನಿಗದಿ ಮಾಡಲಾಯಿತು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...