ಬೆಂಗಳೂರು : ಶಾಂತಿಯುತ ಧರಣಿ ಮಾಡುವವರನ್ನು ಬಂಧಿಸಲಾಗುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಮೋದಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇಡಿ ಮುಖಾಂತರ ಕಾಂಗ್ರೆಸ್ ನಾಯಕರನ್ನು ಹೆದಿರಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನು ಮೇಕೆದಾಟು ವಿಚಾರದಲ್ಲಿ ಬಿಜೆಪಿ ಸರ್ಕಾರಕ್ಕೆ ರಾಜಕೀಯ ಇಚ್ಚಾಶಕ್ತಿ ಕೊರತೆ ಇದೆ. ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.