No menu items!
13.9 C
Munich
Friday, May 15, 2026

ಬಿಎಂಟಿಸಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Must read

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 8 ಜುಲೈ 2022 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ. ಸಾಫ್ಟ್‌ವೇರ್ ಇಂಜಿನಿಯರ್, ಸಿಸ್ಟಮ್ ಆಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಮಾಹಿತಿ ನೀಡಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ಹುದ್ದೆಗೆ ಅರ್ಜಿ ಸಲ್ಲಿಸುವವರು ಇನ್‌ಸ್ಟಾಲೇಷನ್, ಕಾನ್‌ಫಿಗರೇಷನ್, ವಿಂಡೋಸ್ ಮತ್ತು ಲೈನೆಕ್ಸ್‌ ನಿರ್ವಹಣೆ ಬಗ್ಗೆ ತಿಳಿದಿರಬೇಕು.

 

 

ಇ-ಮೇಲ್ ಕಾನ್‌ಫಿಗರೇಷನ್, ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು. ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಎರಡು ವರ್ಷದ ಅನುಭವ ಹೊಂದಿರಬೇಕು. ಬಿಎಂಟಿಸಿ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article