ಅನೇಕ ರೀತಿಯ ಮಹನೀಯರ ಸ್ಮರಣೆ ಮಾಡಿದಾಗ ಮಾತ್ರ ಪ್ರೇರಣೆ ದೊರೆಯುತ್ತದೆ

Date:

ಬೆಂಗಳೂರು : ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದರು. ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 

ಡಾ. ಎಲ್.ಶಿವಲಿಂಗಯ್ಯ ಅವರ ಮನೆಗೆ ತೆರಳಿ ಹಲವಾರು ಭೇಟಿಯಾಗಿದ್ದೇನೆ. ಅವರು ನಮ್ಮ ತಂದೆಯವರ ಒಡನಾಟ, ಆತ್ಮೀಯತೆ, ರಾಜ್ಯ ಪ್ರಗತಿಪಥದಲ್ಲಿ ನಡೆಯಿತು ಎಂಬ ಬಗ್ಗೆ ಅತ್ಯಂತ ರೋಚಕವಾಗಿ ಹೇಳುತ್ತಿದ್ದರು.

 

ಉನ್ನತ ಚಿಂತನೆಯ ವ್ಯಕ್ತಿತ್ವ ಅವರದು. ಹಲವಾರು ನೀರಾವರಿ ಯೋಜನೆಗಳ ರೂಪುರೇಷೆಗಳನ್ನು ಸಿದ್ಧಪಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕನ್ನಡ ನಾಡಿಗೆ ಅನೇಕ ರೀತಿಯ ಮಹನೀಯರ ಸ್ಮರಣೆ ಮಾಡಿದಾಗ ಮಾತ್ರ ಪ್ರೇರಣೆ ದೊರೆಯುತ್ತದೆ. ಬೆಂಗಳೂರಿನಲ್ಲಿ ವಿಕ್ಟೊರಿಯಾ, ನಿಮಾನ್ಸ್ ಸೇರಿದಂತೆ ಹಲವಾರು ಆಸ್ಪತ್ರೆಗಳ ವಿನ್ಯಾಸ ಹಾಗೂ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂದಿನ ಡಾ.ಬಿ.ಆರ್. ಅಂಬೇಡ್ಕರ್ ಸಂಸ್ಥೆಗಳು ಅವರ ದೂರದೃಷ್ಟಿಯ ಫಲವಾಗಿದೆ. ಅವರ ಹಾದಿಯಲ್ಲಿ ನಡೆದು ಕೆಲಸ ಮಾಡಿದಾಗ ಸಮಾಜಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...