ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ

Date:

ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್ ಮಾಡಿ ಶಿವಣ್ಣ‌ನ‌ ಜನುಮದಿನಕ್ಕೆ ಶುಭಾಶಯ ಕೋರಿದೆ.

 

*ಆಗಸ್ಟ್ ನಲ್ಲಿ ಟೈಟಲ್ ರಿವೀಲ್*
ಮಹಾಭಾರತದ ವೀರದಲ್ಲಿ ಒಬ್ಬರಾದ ಅಶ್ವತ್ಥಾಮ ಸಾಹಸಗಾಥೆಯನ್ನು ಆಧಾರಿಸಿ ತಯಾರಾಗಲಿರುವ ಈ ಸಿನಿಮಾದ ಟೈಟಲ್ ನ್ನು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ. ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.

Share post:

Subscribe

spot_imgspot_img

Popular

More like this
Related

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...