- ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ. ಇಂದು ದೇಶಕ್ಕೆ ಕೊಡುಗೆ ನೀಡಿರುವ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ಹೇಡಿಗಳು ಇಡಿ ಮೂಲಕ ಸೋನಿಯಾ ಅವರ ವಿಚಾರಣೆ ಮಾಡ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಇವರ ಕೊಡುಗೆ ಏನಿಲ್ಲ. ಸಮಾಜ ಸಮಾಜಗಳನ್ನ ಒಡೆಯುವ ಕೆಲಸ ಕೇಂದ್ರ ಮಾಡುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ನಿಮ್ಮಂತ ಹೇಡಿಗಳನ್ನ ಮನೆಗೆ ಕಳಿಸ್ತೇವೆ ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಆಕ್ರೋಶ ಹೊರ ಹಾಕಿದ್ದಾರೆ. ಬಳಿಕ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಕೋಟಿ ಕೋಟಿ ಖರ್ಚು ಮಾಡ್ತಾರೆ. ಆದರೆ ಬಿಜೆಪಿ ನಾಯಕರಿಗಿಲ್ಲದ ಇಡಿ ದಾಳಿ, ಕಾಂಗ್ರೆಸ್ ನಾಯಕರಿಗೇಕೆ ? ಎಂದು ಬಿಜೆಪಿ ವಿರುದ್ಧ ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಗರಂ
Date: