ಹೈಫೈ ಫೋನ್ ಗಳನ್ನೇ ಟಾರ್ಗೆಟ್ ಮಾಡಿ ರಾಬರಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸರು ಬಂಧಿಸಿದ್ದಾರೆ. ಮೌನೇಶ್, ಪಿಯೂಚ್, ದೇವರಾಜ್, ಕೃಷ್ಣರೆಡ್ಡಿ, ಪೂವರಸನ್ ಖತರ್ನಾಕ್ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 55 ಸಾವಿರ ರೂಪಾಯಿ ಬೆಲೆ ಬಾಳುವ ಒಂದು ಐನ್ ಪೋನ್ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಎರಡನೇ ಆರೋಪಿ ಪಿಯೂಚ್ ತಲೆ ಮರೆಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ ಎ ಎಲ್ ಪೊಲೀಸರ ಕಾರ್ಯಾಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೈಫೈ ಫೋನ್ ಗಳನ್ನ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ
Date: