ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ವಾ ಅನ್ನೋ ಪ್ರಶ್ನೆ ಕಾಡ್ತಿದೆ.
ನಾವು ಮಾಡ್ತಾನೆ ಇರುತ್ತೇವೆ, ಕಠಿಣ ಕ್ರಮ ತೆಗೆದುಕೊಳ್ಳಿ ನೋಡೋಣ ಅನ್ನೋ ಮನಸ್ಥಿತಿ ಅವರದ್ದು. ಕೇಂದ್ರದಲ್ಲಿ, ರಾಜ್ಯದಲ್ಲಿ ಎರಡೂ ಕಡೆ ನಾವೇ ಇದ್ದರೂ ಏನೂ ಮಾಡಲಾಗ್ತಿಲ್ಲ. ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ತಿದ್ದಾರೆ.
ಸಿಎಂ ಭೇಟಿ ಮಾಡಲು ಹೋಗ್ತಿದ್ದೇನೆ. ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ..? ಕಾರ್ಯಕರ್ತರ ಭಾವನೆ ಜೊತೆಗೆ ನಾವೂ ಇದ್ದೇವೆ. ಕೇವಲ ಅಧಿಕಾರ ಮಾಡಲು ಬಂದಿಲ್ಲ. ಅವರ ಭಾವನೆ ಜೊತೆಗೆ ನಾವೂ ನಿಲ್ತೇವೆ. ವ್ಯವಸ್ಥೆಯನ್ನ ಜಿಹಾದ್ ವಿರುದ್ಧ ಹೋರಾಟ ಮಾಡಲು ಅಣಿಗೊಳಿಸಬೇಕು. ಅಮರಾವತಿಯಲ್ಲಿ, ಉದಯಪುರದಲ್ಲಿ ನಡೆದ ಒಂದು ಘಟನೆಯ ಭಾಗ ಇದು. ಸಿದ್ದರಾಮಯ್ಯ ಕಾಲದಲ್ಲೂ ಸರಣಿ ಹತ್ಯೆ ನಡೆಯುತ್ತಿತ್ತು. ಈಗಲೂ ಅದೇ ರೀತಿ ನಡೆಯುತ್ತಿದೆ ಅನ್ನೋ ಆರೋಪ ಇದೆ. ಹಿಂದೆ ಹಿಂದೂ ವಿರೋಧಿ ಸರ್ಕಾರವಿತ್ತು, ಈಗ ಹಿಂದೂ ಪರ ಸರ್ಕಾರ ಇದೆ. ಆದರೂ ಹೀಗಾಗ್ತಿದೆ ಅನ್ನೋ ಆತಂಕ ಕಾರ್ಯಕರ್ತರದ್ದು. ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಜಿಹಾದ್ ಕಿತ್ತುಹಾಕಲು ನಾವು ಬದ್ದರಿದ್ದೇವೆ ಎಂದು ಸಿಟಿ ರವಿ ಹೇಳಿದ್ದಾರೆ.