ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಆಯೋಜಿಸಿದ್ದ ‘ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆ ಕನ್ನಡವೇ ಮಾಯವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಇಡೀ ಕಾರ್ಯಕ್ರಮವೇ ಹಿಂದಿಮಯವಾಗಿದ್ದು, ಅಲ್ಲಿ ಕನ್ನಡ ಸಂಪೂರ್ಣವಾಗಿ ಕಡೆಗಣಿಸಲ್ಪಿಟ್ಟಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸೇರಿದಂತೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಇರುವುದು ಕರ್ನಾಟಕದಲ್ಲಿ ಹೊರತು ದೆಹಲಿಯಲ್ಲಿ ಅಲ್ಲ ಎಂದು ಲೇವಡಿ ಮಾಡಿದ್ದಾರೆ. ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ವೇದಿಕೆ ಮೇಲಿನ ಬೋರ್ಡ್‌ನಲ್ಲಿ ಒಂದೇ ಒಂದು ಕನ್ನಡ ಅಕ್ಷರ ಹಾಕಿಲ್ಲ. ಎಲ್ಲೆಡೆ ಹಿಂದಿ ರಾರಾಜಿಸುತ್ತಿರುವ ಪೋಟೋಗಳನ್ನು ಮುಖ್ಯಮಂತ್ರಿ ಟ್ವಿಟ್ ನಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಅನ್ನು ಶೇರ್ ಮಾಡುವ ಮೂಲಕ ಕನ್ನಡಿಗರು ಹಿಂದಿ ಹೇರಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಮಾಯ ?
Date: