ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, , ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸಬೇಕು ಎಂದು ಹೇಳಿದ್ದಾರೆ. ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಮುಂಜಾಗ್ರತ ಕ್ರಮವಾಗಿ ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ
Date: