ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕಳೆದರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾದರು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಕನ್ನಡ ಭಾವಗೀತೆಗಳಿಗೆ ಜೀವ ತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ.
ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ. ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಸುಬ್ಬಣ್ಣ ಅವರ ಅಂತ್ಯಕ್ರಿಯೆಯು ಬೆಂಗಳೂರಿನಲ್ಲಿಯೇ ನಡೆಯಲಿದೆ ಎಂದು ಶ್ರೀರಂಗ ತಿಳಿಸಿದ್ದಾರೆ. ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಮಾಡಲಾಗಿದೆ.