ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಬಿ.ಜೆ.ಎಸ್.ಆಟದ ಮೈದಾನದಲ್ಲಿ ಮಾತನಾಡಿದ ಅವರು, ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರಮೋದಿ ರವರ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಂದೋಲನ ನಮ್ಮ ಕ್ಷೇತ್ರದಲ್ಲಿ ಮನೆ ಮೇಲೆ ತ್ರಿರ್ವಣ ಧ್ವಜಾವನ್ನು ಉಚಿತವಾಗಿ ವಿತರಿಸಲಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ,ಆರೋಗ್ಯ ಮತ್ತು ಪರಿಸರ ಮೂಲ ಆದ್ಯತೆ ನೀಡಲಾಗಿದೆ. ಪರಿಸರ ಸ್ವಚ್ಚತೆಗೆ ಆದ್ಯತೆ ಕ್ಷೇತ್ರದಲ್ಲಿರುವ ಪಾರ್ಕ್ ನವೀಕರಣ ಮಾಡಿ ಹಸಿರುಮಯ ವಾತವರಣ ನಿರ್ಮಿಸಲಾಗಿದೆ ಎಂದರು. ಲಕ್ಷಾಂತರ ದೇಶ ಪ್ರೇಮಿಗಳ ತ್ಯಾಗ,ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ,ಬಲಿದಾನ ಮಾಡಿದ ಮಹನೀಯರುಗಳು ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮ ಇತಿಹಾಸವನ್ನ ಯುವ ಸಮೂಹ ಅರಿಯಬೇಕು..!
Date: