ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ

Date:

ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಬಿಜೆಪಿ ಹೊರಟಿದೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿಯವರು ಒಬ್ಬರನ್ನೊಬ್ಬರು ಸಾಯಿಸುತ್ತಿದ್ದಾರೆ. ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಐಟಿ ಕ್ಯಾಪಿಟಲ್ ಮಾಡಿದ್ದೆವು. ಇಂದು ಬಿಜೆಪಿಯವರು ಪಾಥ್​ ಹೋಲ್ ಸಿಟಿ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ಮಾಡಲು ಹೊರಟಿದ್ದಾರೆ. ಧೈರ್ಯವಾಗಿ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ಜನ ಸೋಲಿಸುತ್ತಾರೆ ಎಂಬ ಆತಂಕಕ್ಕೆ ಹೆದರಿ‌ ಮೀಸಲಾತಿ ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇಲಿ ಮಾರ್ಗದಲ್ಲಿ ಹೋಗುತ್ತಿದ್ದಾರೆ. ನಾರಿ ಶಕ್ತಿ ಎಂದು ಹೇಳಿ ಕಾಂಗ್ರೆಸ್ ಶಾಸಕರು ಇರುವ ಕ್ಷೇತ್ರಕ್ಕೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಶೇ.50 ರಷ್ಟು ಮಹಿಳಾ ಮೀಸಲಾತಿ ನೀಡಿಲ್ಲ. ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಮೀಸಲಾತಿ ಸರಿಯಾಗಿ ಹಂಚಿ, ಅನ್ಯಾಯ ಸರಿ ಮಾಡಬೇಕು. ಮಹಿಳೆಯರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತೇವೆ. ಬಿಜೆಪಿಯ ಹೇಡಿ ರಾಜಕಾರಣಿಗಳು, ನರಿಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...