ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಓಡಾಡೋಕೆ ಆಗಲ್ಲ -ಸಿದ್ದರಾಮಯ್ಯ..!

Date:

ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಭೇಟಿಗೆ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ.

ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅದನ್ನೆಲ್ಲಾ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಎಚ್ಚರಿಕೆ ನೀಡಿದರು. ಮೊಟ್ಟೆ ಎಸೆತ ಹೇಡಿಗಳ ಕೃತ್ಯವಾಗಿದೆ. ಟಿಪ್ಪು ವಿಚಾರನೂ ಇಲ್ಲ, ಏನೂ ಇಲ್ಲ, ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ, ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂದು ಈ ರೀತಿ ಪ್ರತಿಭಟನೆ ಮಾಡಿದ್ದಾರೆ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುವುದೇ ಇಲ್ಲ ಎಂದು ಕಿಡಿಕಾರಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಬಿದ್ದಿದೆ. ಕರ್ನಾಟಕದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ತೀವ್ರ ತಪಾಸಣೆ

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ತೀವ್ರ ತಪಾಸಣೆ ಮೈಸೂರು/ಬಾಗಲಕೋಟೆ: ಕಳೆದ...

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಗುಡ್ ಲಕ್: ಡಿಸಿಎಂ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಗುಡ್ ಲಕ್: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: “ಸಿದ್ದರಾಮಯ್ಯ...

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು...

ಪವಿತ್ರ ಗೌಡಗೆ ಮನೆ ಊಟ ಇಲ್ಲ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕಠಿಣ ನಿರ್ಧಾರ

ಪವಿತ್ರ ಗೌಡಗೆ ಮನೆ ಊಟ ಇಲ್ಲ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕಠಿಣ...