No menu items!
3.2 C
Munich
Friday, April 24, 2026

ಜನಪದ ಕಲೆ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ ವಿಪಕ್ಷ ನಾಯಕ

Must read

ಜನಪದ ಕಲೆ ಕಥಾಹಂದರದ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ವೀಕ್ಷಿಸಿದರು ‌ . ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಚಿತ್ರವನ್ನ ಕಣ್ತುಂಬಿಕೊಂಡರು . ಹಾಗೂ ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ
ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಿಸಿದ್ದಾರೆ . ಈ ವೇಳೆ ಮಾತನಾಡಿದ ಅವರು , ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು. ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

ಇದೇ ವೇಳೆ ಶಾಸಕ ಜಮೀರ್ ಅಹಮದ್ ಖಾನ್, ಇಡೀ ಚಿತ್ರತಂಡ ಹಾಜರಿದ್ದರು .

ಈ ಚಿತ್ರವನ್ನು ನೋಡುವಂತೆ ರಾಜ್ಯಪಾಲರಾದ ಥಾವರ್ ಚಂದ್​ ಗೆಹ್ಲೋಟ್ ಅವರಿಗೂ ಚಿತ್ರತಂಡ ಇತ್ತೀಚೆಗೆ ಆಮಂತ್ರಣ ನೀಡಿತ್ತು. ಶೀರ್ಘದಲ್ಲಿಯೇ ರಾಜ್ಯಪಾಲರು ಸಿನಿಮಾ ವೀಕ್ಷಣೆ ಮಾಡಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article